Sunday, June 14, 2026
spot_imgspot_img
spot_imgspot_img

ಹುನಗುಂದ ಸರಣಿ ಅಪಘಾತ – ನುಜ್ಜುಗುಜ್ಜಾದ ಐದು ವಾಹನಗಳು.

- Advertisement -
- Advertisement -

ಹುನಗುಂದ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಕ್ರಾಸ್ ಬಳಿ ಇಂದು ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ಐದು ವಾಹನಗಳ ಮುಂಭಾಗ ನುಜ್ಜುಗುಜ್ಜಾಗಿರುವ ಘಟನೆ ನಡೆದಿದೆ.

ಹುನಗುಂದ ತಾಲೂಕಿನ ಕಮತಗಿ ಕ್ರಾಸ್ ಬಳಿ ಈ ಸರಣಿ ಅಪಘಾತ ಸಂಭವಿಸಿದ್ದು, ಮೂರು ಲಾರಿ ಮತ್ತು ಎರಡು ಕ್ಯಾಂಟರ್ ನಡುವೆ ಅಪಘಾತ ನಡೆದಿದೆ. ಪರಿಣಾಮ ಐದು ವಾಹನಗಳು ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಮೊದಲಿಗೆ ರಸ್ತೆ ಪಕ್ಕ ನಿಂತಿದ್ದ ಒಂದು ಲಾರಿಗೆ ಮತ್ತೊಂದು ಲಾರಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ನಂತರ ಹಿಂದಿನಿಂದ ಬಂದ ಇನ್ನೊಂದು ಲಾರಿ ಕ್ಯಾಂಟರ್‌ಗಳಿಗೆ ಡಿಕ್ಕಿ ಹೊಡೆದಿದೆ. ಸರಣಿ ಅಪಘಾತದಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಓರ್ವ ಲಾರಿ ಚಾಲಕ ಗಾಯಗೊಂಡಿದ್ದು. ಕೂಡಲೇ ಆತನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!