Saturday, June 13, 2026
spot_imgspot_img
spot_imgspot_img

ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡಗೆ ಜಾಮೀನು..!

- Advertisement -
- Advertisement -

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ, ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರಾಗಿದೆ.

ಪಿಡಿಜೆ ಕೋರ್ಟ್ ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿದೆ. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದರು.

ಅಕ್ರಮವಾಗಿ ಮಗುವನ್ನು ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ಬಂಧನವಾಗಿದ್ದ ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ ಪೊಲೀಸ್ ಠಾಣೆಯಲ್ಲಿ ಗೋಳಾಡಿದ್ದರು. ಮಗುವನ್ನು ಕರೆದುಕೊಂಡು ಬಂದಿರುವ ವಿಷಯದಲ್ಲಿ ನನ್ನಿಂದ ಯಾವುದೇ ತಪ್ಪು ಆಗಿಲ್ಲವೆಂದು ಹೇಳಿಕೊಂಡಿದ್ದರು.

ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿರುವ ವಿಚಾರವಾಗಿ ದೂರು ದಾಖಲಿಸಿಕೊಂಡಿದ್ದ ಬ್ಯಾಡರಹಳ್ಳಿ ಪೊಲೀಸರು ಮಾರ್ಚ್ 22ರಂದು ಬಂಧಿಸಿದ್ದರು. ಪೊಲೀಸರು ಹಾಗೂ CWC ಅಧಿಕಾರಿಗಳಿಂದ ಸೋನು ವಿಚಾರಣೆ ನಡೆದಿತ್ತು.

ಅಕ್ರಮವಾಗಿ ಮಗುವನ್ನು ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದರು. ನಂತರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

- Advertisement -

Related news

error: Content is protected !!