Tuesday, July 28, 2026
spot_imgspot_img
spot_imgspot_img

ಪ್ರಜ್ವಲ್ ರೇವಣ್ಣನ 4ನೇ ಪ್ರಕರಣದ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್..!

- Advertisement -
- Advertisement -

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಈ ಹಿಂದೆ 3 ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದಲ್ಲಿ ಆದೇಶ ಬಾಕಿ ಉಳಿದಿತ್ತು.

ಇಂದು ನಾಲ್ಕನೇ ಪ್ರಕರಣದ ಜಾಮೀನು ಅರ್ಜಿಯನ್ನು ಕೂಡ ಹೈಕೋರ್ಟ್ ಏಕಸದಸ್ಯ ಪೀಠ ವಜಾ ಮಾಡಿ ಆದೇಶ ಹೊರಡಿಸಿದೆ.ಈ ಹಿಂದೆ ಕೋರ್ಟ್ ಮೂರು ಅತ್ಯಾಚಾರ ಕೇಸ್, ಒಂದು ಅಶ್ಲೀಲ ದೃಶ್ಯ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ ಕೋರ್ಟ್ 4ನೇ ಪ್ರಕರಣದ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ಹೈಕೋರ್ಟ್ ಪ್ರಜ್ವಲ್ ರೇವಣ್ಣ ವಿರುದ್ಧ 4ನೇ ಪ್ರಕರಣದ ಜಾಮೀನು ಅರ್ಜಿಯನ್ನು ಕೂಡ ವಜಾ ಮಾಡಿದೆ.

ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು ನಾಲ್ಕು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್​ನಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ 2,144 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅದು ಸಾಧ್ಯವಾಗಿಲ್ಲ, ಈಗ ಹೈಕೋರ್ಟ್ ಎಲ್ಲಾ ನಾಲ್ಕು ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಮತ್ತೆ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್​ನಲ್ಲಿ ನಿರಾಸೆಯಾಗಿದೆ.

- Advertisement -

Related news

error: Content is protected !!