- Advertisement -
- Advertisement -


ಬೈಂದೂರು: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೈಂದೂರು ಠಾಣೆಯ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ.

ಬೈಂದೂರು ಸಮೀಪದ ನಾವುಂದ ಗ್ರಾಮದ ಅರೆಹೊಳೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿದ್ದುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆರೋಪಿ ರವೀಂದ್ರ ಪೂಜಾರಿಯವರು ಮಹೀಂದ್ರಾ ಮ್ಯಾಕ್ಸಿಮೋ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ.

ಇನ್ನು ನಿನ್ನೆ ಬೆಳಗ್ಗೆ ಹಲಗೇರಿ ಗ್ರಾಮದಿಂದ ಎರಡು ಹಾಗೂ ಮುಳ್ಳಿಕಟ್ಟೆ ಗ್ರಾಮದಿಂದ ಇನ್ನೆರಡು ಹಸುಗಳನ್ನು ಸಾಗಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ನಾವುಂದ ಜಲೀಲ್ ಅವರ ಸೂಚನೆ ಮೇರೆಗೆ ಈ ಕೃತ್ಯ ಎಸಗಿರುವುದಾಗಿಯೂ ಆರೋಪಿಗಳು ಬಹಿರಂಗಪಡಿಸಿದ್ದಾರೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.


- Advertisement -