Thursday, June 25, 2026
spot_imgspot_img
spot_imgspot_img

ಬೈರಂಪಳ್ಳಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

- Advertisement -
- Advertisement -

ಬೈರಂಪಳ್ಳಿ: ಮುನಿಯಾಲ್ ಆಯುರ್ವೇದ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್ ಮತ್ತು ಶ್ರಮಿಕ ತರುಣರ ತಂಡ ಬೈರಂಪಳ್ಳಿ ಸಂಘಟನೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವು ಬೈರಂಪಳ್ಳಿ ಗ್ರಾ ಪಂ ವ್ಯಾಪ್ತಿಯ 41ನೇ ಶೀರೂರು ಒಂದನೇ ವಾರ್ಡ್ ನ ನ್ಯೂ ಕಲ್ಲಾಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೈರಂಪಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ಶ್ರಮಿಕ ತರುಣರ ತಂಡ ಬೈರಂಪಳ್ಳಿ ಸಂಸ್ಥಾಪಕ ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುನಿಯಾಲು ಆಯುರ್ವೇದ ಸಂಸ್ಥೆಯ ವೈದ್ಯರು, ಶ್ರಮಿಕ ಮಹಿಳಾ ಘಟಕದ ​​ಅಧ್ಯಕ್ಷೆ ಶ್ರೀಮತಿ ಸಂಪ ಪೂಜಾರಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಪೂಜಾರಿ, ನ್ಯೂ ಕಲ್ಲಾಳ ಹಾಲಕ್ಕಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಸವಿತಾ ಮತ್ತು ಶಾಲಾ ಶಿಕ್ಷಕ ವೃಂದ, ಎಸ್‌ಡಿಎಂಸಿ ಸದಸ್ಯರು, ಗ್ರಾಮಸ್ಥರು, ಶ್ರಮಿಕ ತರುಣರ ತಂಡ ಬೈರಂಪಳ್ಳಿ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!