Sunday, June 7, 2026
spot_imgspot_img
spot_imgspot_img

ಬಜ್ಪೆ: ಉದ್ಯಮಿ ಮೇಲೆ ತಲವಾರು ದಾಳಿ!!

- Advertisement -
- Advertisement -

ಮಂಗಳೂರು: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿ‌ ನಿನ್ನೆ ರಾತ್ರಿ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ.

ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56) ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ ಪರಾರಿಯಾಗಿದ್ದಾರೆ.

ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ವೆನ್ಝ್ ಹೆಸರಿನ ಬಟ್ಟೆ ಅಂಗಡಿ ಹೊಂದಿರುವ ಅಝೀಝ್ ಕಂದಾವರ ಮಸೀದಿಯ ಆಡಳಿತ ಕಮಿಟಿಯಲ್ಲೂ ಸಕ್ರಿಯರಾಗಿದ್ದರು. ಪ್ರಕರಣ ದಾಖಲಿಸಿರುವ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!