Sunday, June 7, 2026
spot_imgspot_img
spot_imgspot_img

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ.  ಕೆಲ ಕಾಲ ಆತಂಕ.

- Advertisement -
- Advertisement -

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆ ಬಂದು ಮಧ್ಯಾಹ್ನದಿಂದ ಸಂಜೆಯವರೆಗೆ ಆತಂಕ ಸೃಷ್ಟಿಯಾಗಿತ್ತು.

ಮಂಗಳೂರು ವಿಮಾನ‌ ನಿಲ್ದಾಣದ ಮಾಜಿ ನಿರ್ದೇಶಕರಿಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿದ್ದು, ವಿಮಾನ‌ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದಾನೆ. ಕರೆಯನ್ನು ಗಂಭೀರವಾಗಿ ಸ್ವೀಕರಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಐಎಸ್ಎಫ್ ಸಿಬ್ಬಂದಿ, ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದ್ದಾರೆ. ಆದರೆ ಸಂಜೆಯ ವೇಳೆಗೆ ಅದು ಹುಸಿ ಕರೆ ಎಂಬುದು ದೃಢವಾಗಿದೆ.

ಬಜ್ಪೆ ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಎಂಬಾತ ಬಾಂಬ್ ಮಾದರಿಯ ಸ್ಫೋಟಕ ಇರಿಸಿದ ಬಳಿಕ ಇಂದು ಮತ್ತೆ ಕಿಡಿಗೇಡಿಗಳು ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದಾರೆ. ಇಡೀ ವಿಮಾನ ನಿಲ್ದಾಣವನ್ನು ತಪಾಸಣೆ ನಡೆಸಿದ್ದು ಈ ವೇಳೆ ಯಾವುದೇ ಶಂಕಿತ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!