Friday, August 14, 2026
spot_imgspot_img
spot_imgspot_img

ರಾಜ್ಯದಲ್ಲಿ ಪಾನ್ ಮಸಾಲಾ ಗುಟ್ಕಾ ನಿಷೇಧ ಆದೇಶ ರದ್ದು!

- Advertisement -
- Advertisement -

ಬೆಂಗಳೂರು: ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಜಾರಿಯಾದ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಬ್ಯಾನ್ ಇದೀಗ ರದ್ದಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಅವರು ಆದೇಶ ವಾಪಾಸ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಲಾಗಿತ್ತು. ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಆಹಾರ ಸುರಕ್ಷತಾ ಆಯುಕ್ತರು ನಿಷೇಧಿಸಿದ್ದರು. ಇದೀಗ ಡಿಕೆ ಶಿವಕುಮಾ‌ರ್ ಇದನ್ನು ರದ್ದು ಮಾಡಲು ಸೂಚನೆ ನೀಡಿದ್ದಾರೆ.

ತನಗೆ ಮಾಹಿತಿ ನೀಡದೆ ಈ ಆದೇಶ ಹೊರಡಿಸಲಾಗಿದೆ. ಇದರಿಂದ ಹಲವಾರು ರೈತರು ನಷ್ಟ ಅನುಭವಿಸಲಿದ್ದಾರೆ ಎಂದು ಸಿಎಂ ಗರಂ ಆಗಿದ್ದು, ಕೂಡಲೇ ಆದೇಶ ಹಿಂಪಡೆಯುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!