Sunday, August 2, 2026
spot_imgspot_img
spot_imgspot_img

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಶಾಲಾ-ಕಾಲೇಜು, ವಿವಿಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಕ್ರಮ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

2026–27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲೆ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳು, ಕಠಿಣ ನಿಯಮಗಳು ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದರು.

ಇನ್ನೂ 1ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ದುರಸ್ತಿ ಕಾಮಗಾರಿಗಳಿಗೆ ₹565 ಕೋಟಿ, ಶೌಚಾಲಯ ನಿರ್ಮಾಣಕ್ಕೆ ₹75 ಕೋಟಿ ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು ₹25 ಕೋಟಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

- Advertisement -

Related news

error: Content is protected !!