Saturday, June 13, 2026
spot_imgspot_img
spot_imgspot_img

ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ!!

- Advertisement -
- Advertisement -

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಸಂಭವಿಸಿದೆ. ಹವಾಮಾನ ಇಲಾಖೆ ವಾಯು ಭಾರ ಕುಸಿತ ಸಂಭವಿಸಿರುವುದನ್ನು ಅಧಿಕೃತವಾಗಿ ಬಹಿರಂಗಪಡಿಸಿದೆ. ಇದು ಚಂಡಮಾರುತದ ಸ್ವರೂಪ ಪಡೆಯಲಿದೆಯೇ ಎಂಬುದು ಮುಂದಿನ 24 ಗಂಟೆಗಳಲ್ಲಿ ನಿರ್ಧಾರವಾಗಲಿದೆ.

ಇದೇ ವೇಳೆ ಬಂಗಾಳ ಕೊಲ್ಲಿಯಲ್ಲಿನ ವಾಯು ಭಾರ ಕುಸಿತದಿಂದ ತಮಿಳುನಾಡು ಮತ್ತು ಕೇರಳದ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಇಂದು ಸಂಜೆಯೊಳಗೆ ಮೀನುಗಾರರು ದಡಕ್ಕೆ ಹಿಂತಿರುಗುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ.

- Advertisement -

Related news

error: Content is protected !!