Sunday, May 19, 2024
spot_imgspot_img
spot_imgspot_img

ದ್ವಿತೀಯ ಪಿಯು ಫಲಿತಾಂಶದಲ್ಲಿ ಮತ್ತೆ ಬದಲಾವಣೆ!

- Advertisement -G L Acharya panikkar
- Advertisement -

ಬೆಂಗಳೂರು: ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಪಡಿಸಿದ ರಾಜ್ಯ ಸರ್ಕಾರವು ಈ ಬಾರಿ ಹಿಂದಿನ ಪ್ರಥಮ ಪಿಯುಸಿ, ಎಸ್ ಎಸ್ ಎಲ್ ಸಿ ಅಂಕಗಳ ಆಧಾರದ ಮೇಲೆ ಗ್ರೇಡ್ ರೂಪದಲ್ಲಿ ಫಲಿತಾಂಶ ಪ್ರಕಟಿಸೋದಾಗಿ ಘೋಷಿಸಿತ್ತು. ಆದರೆ ಇದೀಗ ದ್ವಿತೀಯ ಪಿಯು ಫಲಿತಾಂಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದ್ದು, ಗ್ರೇಡ್ ಬದಲಾಗಿ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಗೊಳಿಸೋದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸ್ನೇಹಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವ ಅವರು, ದ್ವಿತೀಯ ಪಿಯು ಫಲಿತಾಂಶವನ್ನು ಗ್ರೇಡ್ ಮಾದರಿಯಲ್ಲಿ ಪ್ರಕಟಿಸೋದರಿಂದ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ತೊಂದರೆಯಾಗಲಿದೆ. ಇದರಿಂದಾಗಿ ಈ ಕ್ರಮವನ್ನು ಬದಲಿಸಲಾಗುತ್ತಿದ್ದು, ಹಳೆಯ ಪದ್ದತಿಯಂತೆಯೇ ಅಂಕಗಳ ಮಾದರಿಯಲ್ಲಿ ಫಲಿತಾಂಶವನ್ನು ಪ್ರಕಟಿಸೋದಾಗಿ ಹೇಳಿದ್ದಾರೆ.

ಈ ಬಾರಿಯ ದ್ವಿತೀಯ ಪಿಯು ಫಲಿತಾಂಶ ಜೂನ್ ಕೊನೆಯ ವಾರದಲ್ಲಿ ಪ್ರಕಟಿಸೋ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಗ್ರೇಡ್ ಮಾದರಿಯಲ್ಲಿ ಫಲಿತಾಂಶ ಪ್ರಕಟಿಸೋದರಿಂದ ಪಿಯು ವಿದ್ಯಾರ್ಥಿಗಳಿಗೆ ಮುಂದಿನ ಉದ್ಯೋಗಾವಕಾಶದ ಸಂದರ್ಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು, ದ್ವಿತೀಯ ಪಿಯು ಫಲಿತಾಂಶವನ್ನು ಹಳೆಯ ಮಾದರಿಯಲ್ಲಿಯೇ ಅಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!