Thursday, April 18, 2024
spot_imgspot_img
spot_imgspot_img

ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತೀರ್ಣವಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲಿಯೇ ಪೂರಕ ಪರೀಕ್ಷೆ

- Advertisement -G L Acharya panikkar
- Advertisement -

ಬೆಂಗಳೂರು: ದ್ವೀತಿಯ ಪಿಯುಸಿ ಪೂರಕ ಪರೀಕ್ಷೆಯನ್ನ ಯಶಸ್ವಿಯಾಗಿ ನಡೆಸಿದ ಬೆನ್ನಲ್ಲೇ ಇದೀಗ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತೀರ್ಣವಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲಿಯೇ ಪೂರಕ ಪರೀಕ್ಷೆ ನಡೆಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಇಲಾಖೆ ಫೆಬ್ರವರಿಯಲ್ಲಿ ನಡೆದ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಗೈರಾಗಿರುವ ಹಾಗೂ ಅನುತೀರ್ಣವಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ 20-10-2020ರೊಳಗೆ ಆಯಾ ಕಾಲೇಜಿನಲ್ಲಿ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳ ಅಂಕಗಳನ್ನು ಪರಿಗಣಿಸಲು ತಿಳಿಸಿದೆ.

ಒಂದು ವೇಳೆ ವಿದ್ಯಾರ್ಥಿಗಳು ಆಗಲೂ ಅನುತೀರ್ಣರಾದಲ್ಲಿ, ಆಯಾ ವಿಷಯಗಳ ಉತ್ತೀರ್ಣಕ್ಕೆ ಅವಶ್ಯವಿರುವ ಕನಿಷ್ಠ ಅಂಕಗಳನ್ನು ನೀಡಿ ಉತ್ತೀರ್ಣಗೊಳಿಸಿ ಮುಂದಿನ ಶಿಕ್ಷಣಕ್ಕೆ ಅವಕಾಶ ನೀಡುವಂತೆ ಸೂಚಿಸಿದೆ.

- Advertisement -

Related news

error: Content is protected !!