Sunday, June 14, 2026
spot_imgspot_img
spot_imgspot_img

ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ರಾಜ್ಯದ ನೂತನ ಮುಖ್ಯಮಂತ್ರಿಯ ಆಯ್ಕೆ ಸಾಧ್ಯತೆ!

- Advertisement -
- Advertisement -

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮಂಗಳವಾರ ಸಂಜೆ 7 ಗಂಟೆಗೆ ಕರೆಯಲಾಗಿದೆ. ಇಂದೇ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ನಗರದ ಕ್ಯಾಪಿಟಲ್‌ ಹೊಟೇಲ್‌ನಲ್ಲಿ ರಾತ್ರಿ 7.30 ಕ್ಕೆ ಈ ಸಭೆ ನಡೆಯಲಿದೆ.

ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಹೈಕಮಾಂಡ್ ನೇಮಕ ಮಾಡಿರುವ ವೀಕ್ಷಕ ಧರ್ಮೆಂದ್ರ ಪ್ರಧಾನ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಶಾಸಕರಿಗೆ ವೀಕ್ಷಕರು ತಿಳಿಸಲಿದ್ದಾರೆ. ಆ ಬಳಿಕ ನೂತನ ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಹಿರಿಯ ಶಾಸಕರು ಅನುಮೋದಿಸಲಿದ್ದಾರೆಂದು ತಿಳಿದುಬಂದಿದೆ.

- Advertisement -

Related news

error: Content is protected !!