Saturday, April 27, 2024
spot_imgspot_img
spot_imgspot_img

ಕೊರೋನಾದಿಂದ ಗುಣಮುಖರಾದ ಅನೇಕರಲ್ಲಿ ಬ್ಲ್ಯಾಕ್ ಫಂಗಸ್ ರೋಗ ಪತ್ತೆ!

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಗುಣಮುಖರಾದಂತ ಅನೇಕರಲ್ಲಿ ಬ್ಲ್ಯಾಕ್ ಫಂಗಸ್ ರೋಗ ಪತ್ತೆಯಾಗಿದ್ದು, ಈವರೆಗೆ ರಾಜ್ಯದಲ್ಲಿ 2,856 ಜನರಿಗೆ ಬ್ಲ್ಯಾಕ್ ಫಂಗಸ್ ರೋಗ ಕಾಣಿಸಿಕೊಂಡಿದೆ. ಇದರಲ್ಲಿ ರೋಗ ಕಾಣಿಸಿಕೊಂಡ 225 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ 2,856 ಜನರಿಗೆ ಬ್ಲ್ಯಾಕ್ ಫಂಗಸ್ ರೋಗ ದೃಢಪಟ್ಟಿದೆ. ಇದುವರೆಗೆ ರೋಗ ಕಾಣಿಸಿಕೊಂಡಂತ 191 ಜನರು ಗುಣಮುಖರಾಗಿದ್ದಾರೆ. ಇನ್ನುಳಿದ 2,316 ಜನರು ರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ತಿಳಿಸಿದ್ದಾರೆ.

ಇನ್ನೂ ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದಂತೆ, ಬ್ಲ್ಯಾಕ್ ಫಂಗಸ್ ರೋಗಕ್ಕೂ ಬೆಂಗಳೂರು ನಗರದಲ್ಲಿ 72 ಜನರು, ಕಲಬುರ್ಗಿಯಲ್ಲಿ 22 ಜನರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18 ಜನರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 225 ಜನರು ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!