Thursday, April 25, 2024
spot_imgspot_img
spot_imgspot_img

ಬಿಎಸ್‌ವೈ ರಾಜೀನಾಮೆ ಸುಳಿವು..!?

- Advertisement -G L Acharya panikkar
- Advertisement -

ಪಕ್ಷದ ಹೈಕಮಾಂಡ್ ಏನು ಸೂಚನೆ ಕೊಡುತ್ತಾರೋ ಅದರಂತೆ ನಾನು ನಡೆದುಕೊಳ್ಳುತ್ತೇನೆ. ಜು.25ರಂದು ಯಾವ ಸಂದೇಶ ಅವರು ನೀಡುತ್ತಾರೋ ಅದಕ್ಕೆ ನಾನು ಬದ್ದನಾಗಿರುತ್ತೇನೆ ಎಂದು ಪರೋಕ್ಷವಾಗಿ ಹೇಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆಯ ಸುಳಿವು ನೀಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

ಕಳೆದ ಎರಡು ವಾರಗಳಿಂದ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳಿಗೆ ಸ್ವತಃ ಸಿಎಂ ಅವರೇ ಮೌನ ಮುರಿದು ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಇದೇ 25ರಂದು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಏನು ಸಂದೇಶ ಕೊಡುತ್ತಾರೋ ಅದನ್ನು ಪಾಲಿಸುತ್ತೇನೆ. ಹೈಕಮಾಂಡ್ ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾನು ಬದ್ದನಾಗಿರುತ್ತೇನೆ ಎನ್ನುವ ಮೂಲಕ ಪದತ್ಯಾಗದ ಮುನ್ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಕಾರಚಾರಕನಹಳ್ಳಿಯ ಕೋದಂಡರಾಮ ದೇವಸ್ಥಾನದಲ್ಲಿ ಲೋಕಕಲ್ಯಾಣಕ್ಕಾಗಿ ನಡೆಸಿದ ಧನ್ವಂತರಿ ಯಾಗದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ಖಚಿತ ಎಂಬ ಸೂಚ್ಯವಾಗಿ ಹೇಳಿದರು.

ಹೈಕಮಾಂಡ್ ಯಾವ ಸಂದೇಶ ನೀಡುತ್ತದೆ ಎಂಬುದು ಈ ಕ್ಷಣದವರೆಗೂ ನನಗೆ ಗೊತ್ತಿಲ್ಲ. ಪಕ್ಷದ ಶಿಸ್ತಿನ ಸಿಪಾಯಿ ಆಗಿ ನಾನು ನಡೆದುಕೊಳ್ಳುವುದು ನನ್ನ ಕರ್ತವ್ಯ. ನನ್ನಂತಹ ಅದೃಷ್ಟಶಾಲಿಯೇ ಯಾರೂ ಇಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 26ರಂದು ಸರ್ಕಾರದ ಸಾಧನೆಗಳನ್ನು ಹೊತ್ತ ಕಾರ್ಯಕ್ರಮವನ್ನು ನಡೆಸಲಿದ್ದೇವೆ. ಬಳಿಕ ವರಿಷ್ಠರಿಂದ ಏನು ಸೂಚನೆ ಬರುತ್ತದೆಯೋ ಅದನ್ನು ಪಾಲನೆ ಮಾಡುತ್ತೇನೆ ಎಂದರು.

driving

ಇನ್ನು ಟ್ವಿಟ್ಟರ್ ಖಾತೆಯಲ್ಲಿ “ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು.
ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ” ಎಂದು ಬರೆದುಕೊಂಡಿದ್ದಾರೆ.

- Advertisement -

Related news

error: Content is protected !!