Friday, June 5, 2026
spot_imgspot_img
spot_imgspot_img

ಬಿಎಸ್ ಯಡಿಯೂರಪ್ಪನವರ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಿದ ರಾಜ್ಯಪಾಲರು

- Advertisement -
- Advertisement -

ಬೆಂಗಳೂರು: ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದು 2 ವರ್ಷದ ಸಂದರ್ಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದರು.

ರಾಜಭವನಕ್ಕೆ ಕಾಲ್ನಡಿಗೆಯಲ್ಲೇ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ನೀಡಿದಂತ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಈ ಮೂಲಕ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ಸಲ್ಲಿಸಿದ್ದಂತ ರಾಜೀನಾಮೆ ಅಂಗೀಕಾರಗೊಂಡಿದೆ.

ನಾನು ಮುಂದಿನ ಸಿಎಂ ಯಾರಾಗಬೇಕು ಎಂಬುದನ್ನು ಯಾರನ್ನು ಸೂಚಿಸಿಲ್ಲ. ನನಗೆ ಎಲ್ಲಾ ರೀತಿಯ ಸ್ಥಾನಮಾನವನ್ನು ಬಿಜೆಪಿ ರಾಷ್ಟ್ರೀಯ ನಾಯಕರು ನೀಡಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ನನ್ನ ರಾಜೀನಾಮೆಯನ್ನು ರಾಜ್ಯಪಾಲರು ಒಪ್ಪಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಆ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡೋಣ ಎಂಬುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದರು.

- Advertisement -

Related news

error: Content is protected !!