Friday, July 11, 2025
spot_imgspot_img
spot_imgspot_img

ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಕೊಟ್ಟ ಮಾತನ್ನು ತಪ್ಪಿದೆ; ಕೋಡಿ ಹಳ್ಳಿ ಚಂದ್ರಶೇಖರ್ ಆರೋಪ!

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಕೊಟ್ಟ ಮಾತನ್ನು ತಪ್ಪಿದೆ ಎಂದು ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿ ಹಳ್ಳಿ ಚಂದ್ರಶೇಖರ್ ಆರೋಪಿಸಿದ್ದಾರೆ.

driving

ಸರ್ಕಾರ ಈ ಹಿಂದೆ ಭರವಸೆ ನೀಡಿದಂತೆ ಆರನೇ ವೇತನ ಆಯೋಗವನ್ನು ಜಾರಿಗೆ ತರಬೇಕು. ಅದರ ಬದಲಾಗಿ ವಿಳಂಬ ತಂತ್ರದ ಮೊರೆ ಹೋಗಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಇಂದು ಸಂಜೆಯೊಳಗೆ ಬೇಡಿಕೆ ಈಡೇರಿಸಲು ಗಡುವು ನೀಡುತ್ತೇವೆ. ತಪ್ಪಿದರೆ ನಾಳೆಯಿಂದ ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ ಸ್ತಬ್ದಗೊಳ್ಳಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ, ಸಾರಿಗೆ ಇಲಾಖೆಯ ಖಾಸಗೀಕರಣಕ್ಕೆ ಷಡ್ಯಂತ್ರ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -

Related news

error: Content is protected !!