Saturday, May 18, 2024
spot_imgspot_img
spot_imgspot_img

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ಐವರು ಸೆರೆ!

- Advertisement -G L Acharya panikkar
- Advertisement -
driving

ಬೆಂಗಳೂರು: ನಗರದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ಹೈಗ್ರೌಂಡ್ಸ್, ಶೇಷಾದ್ರಿಪುರಂ, ಉಪ್ಪಾರಪೇಟೆ, ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿದ್ದು, ಈ ಕುರಿತು ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹ 5 ಲಕ್ಷವನ್ನು ಜಪ್ತಿ ಮಾಡಲಾಗಿದೆ. ಐವರು ಆರೋಪಿಗಳು ಮೊಬೈಲ್ ಮುಖಾಂತರ ಬೆಟ್ಟಿಂಗ್ ನಡೆಸುತ್ತಿದ್ದರು. ಪಂದ್ಯ ನಡೆಯುವ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರೋಪಿಗಳ ವಿರುದ್ಧ ಪ್ರತ್ಯೇಕ ಠಾಣೆಗಳಲ್ಲಿ ಕೇಸ್ ದಾಖಲು ಮಾಡಲಾಗಿದೆ.

- Advertisement -

Related news

error: Content is protected !!