Friday, April 26, 2024
spot_imgspot_img
spot_imgspot_img

ಸಿ.ಟಿ.ರವಿ, ಸದಾನಂದ ಗೌಡ ವಿವಾದಾತ್ಮಕ ಹೇಳಿಕೆ; ಕೇಸು ದಾಖಲು!

- Advertisement -G L Acharya panikkar
- Advertisement -

ಬೆಂಗಳೂರು: ಲಸಿಕೆ ಅಭಿಯಾನದಡಿಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿತ್ತು. ಇದರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆ ನೀಡಿದ್ದು, ಇದೀಗ ವಿವಾದಕ್ಕೆ ಸಿಲುಕಿದ್ದಾರೆ.

ಹೈಕೋರ್ಟ್ ನ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಸಿ.ಟಿ.ರವಿ, ನ್ಯಾಯಾಧೀಶರು ಸರ್ವಜ್ಞರಲ್ಲ ಎಂದು ಹೇಳಿಕೆ ನೀಡಿದ್ದು, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಹೈಕೋರ್ಟ್ ತೀರ್ಪು ನೀಡಿದ ಕೂಡಲೇ ಲಸಿಕೆ ಉತ್ಪಾದನೆ ಇಲ್ಲದೇ ನಾವು ನೇಣು ಹಾಕಿಕೊಳ್ಳಬೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಇವರಿಬ್ಬರ ವಿರುದ್ಧ ವಕೀಲ ಜಿ.ಆರ್. ಮೋಹನ್ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡು ತನಿಖೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ನ್ಯಾಯಾಲಯದ ಹೇಳಿಕೆಯನ್ನು ಹಾಗೂ ನ್ಯಾಯಾಧೀಶರ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಲಾಗಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಈ ದೂರು ದಾಖಲಾಗಿದೆ. ಇಬ್ಬರ ಹೇಳಿಕೆಗಳ ತುಣುಕುಗಳ ಸಹಿತ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!