Saturday, April 20, 2024
spot_imgspot_img
spot_imgspot_img

ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂತೆ ಕಂತೆ ನೋಟುಗಳು ಪತ್ತೆ- ಸಿಐಎಸ್‍ಎಫ್ ಪೊಲೀಸರ ಭರ್ಜರಿ ಬೇಟೆ!

- Advertisement -G L Acharya panikkar
- Advertisement -

ಬೆಂಗಳೂರು: ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂತೆ ಕಂತೆ ನೋಟುಗಳು ಸಿಕ್ಕಿದ್ದು, ಸಿಐಎಸ್‍ಎಫ್ ಪೊಲೀಸರು ಭರ್ಜರಿ ಬೇಟೆ ನಡೆಸಿ, ಕಸ್ಟಮ್ಸ್ ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.

ಸಿಐಎಸ್‍ಎಫ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಚೆನ್ನೈನಿಂದ ಲಕ್ನೋಗೆ ತೆರಳಲು ಬೆಂಗಳೂರಿಗೆ ಬಂದಿದ್ದ ಕಸ್ಟಮ್ಸ್ ಅಧಿಕಾರಿ ಇರ್ಫಾನ್ ಅಹಮದ್ ಸಿಕ್ಕಿಬಿದ್ದಿದ್ದಾನೆ. ಅಧಿಕಾರಿಯ ಸೂಟ್ ಕೇಸ್, ಬ್ಯಾಗ್ ನಲ್ಲಿದ್ದ ಒಟ್ಟು 74,81,500 ರೂ.ಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಬೆಲೆ ಬಾಳುವ ಮೊಬೈಲ್, ಆಪಲ್ ವಾಚ್ ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಿಐಎಸ್‍ಎಫ್ ಅಧಿಕಾರಿಗಳ ಪರಿಶೀಲನೆ ವೇಳೆ ಕಸ್ಟಮ್ಸ್ ಅಧಿಕಾರಿಯ ಪತ್ನಿ ಬಾತ್ ರೂಂ ನಲ್ಲಿ ಕಂತೆ ಕಂತೆ ನೋಟುಗಳನ್ನು ಎಸೆದಿದ್ದಾರೆ. ಅಧಿಕಾರಿಯ ಪತ್ನಿ ಬಾತ್ ರೂಂ ನಲ್ಲಿ 10 ಲಕ್ಷ ರೂ. ಎಸೆದಿರುವುದು ಪತ್ತೆಯಾಗಿದೆ. ಈ ಪ್ರಕರಣವನ್ನು ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

- Advertisement -

Related news

error: Content is protected !!