Sunday, July 19, 2026
spot_imgspot_img
spot_imgspot_img

ಬೆಂಗಳೂರು: ಸೈಬರ್ ವಂಚನೆ; ಸ್ನೇಹಿತನ ಅಕೌಂಟ್ ಬಳಸಿ 7 ಕೋಟಿ ವರ್ಗಾವಣೆ

- Advertisement -
- Advertisement -

ಬೆಂಗಳೂರು: ಸೈಬರ್ ವಂಚನೆಗೆ ಸ್ನೇಹಿತನ ಅಕೌಂಟ್ ಬಳಕೆ ಮಾಡಿಕೊಂಡು ಬರೋಬ್ಬರಿ 7 ಕೋಟಿ ರೂ. ವರ್ಗಾವಣೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆಯುಷ್ & ಇತರರು ಸೇರಿಕೊಂಡು ವಿದ್ಯಾರ್ಥಿಯೊಬ್ಬನಿಗೆ ವಂಚನೆ ಮಾಡಿದ್ದು, ವಂಚನೆಗೊಳಗಾದ ವಿದ್ಯಾರ್ಥಿ ಹಾಗೂ ಆಯುಷ್ ಕಳೆದ ಒಂದು ವರ್ಷದಿಂದ ಸ್ನೇಹಿತರಾಗಿದ್ದರು ಎಂದು ತಿಳಿದುಬಂದಿದೆ.

ಆಯುಷ್ ತನ್ನ ಅಕೌಂಟ್ ಬ್ಲಾಕ್ ಆಗಿದೆ ಎಂದು ವಿದ್ಯಾರ್ಥಿ ಅಕೌಂಟ್ ಡಿಟೇಲ್ಸ್ ಪಡೆದಿದ್ದ. ಹೀಗಾಗಿ ಆಯುಷ್‌ನ ನಂಬಿ ವಿದ್ಯಾರ್ಥಿ ಪಾಸ್‌ಬುಕ್, ಎಟಿಎಂ ಕಾರ್ಡ್, ಮೊಬೈಲ್ ಸಿಮ್ ಕೊಟ್ಟಿದ್ದ. ಬಳಿಕ ಬ್ಯಾಂಕ್‌ನಿಂದ ವಿದ್ಯಾರ್ಥಿಗೆ ಕರೆ ಬಂದಿತ್ತು. ನಿಮ್ಮ ಅಕೌಂಟ್ ಮೂಲಕ ಸೈಬರ್ ವಂಚನೆ ಆಗಿದ್ದು, 7 ಕೋಟಿ ರೂ. ಹಣ ವರ್ಗಾವಣೆ ಆಗಿದೆ ಎಂದು ಮಾಹಿತಿ ನೀಡಿದ್ದರು. ತದನಂತರ ವಿದ್ಯಾರ್ಥಿಯ ಬ್ಯಾಂಕ್ ಅಕೌಂಟ್ ಬ್ಲಾಕ್ ಮಾಡಲಾಯ್ತು ಎನ್ನಲಾಗಿದೆ.

ವಿದ್ಯಾರ್ಥಿಯು ಉತ್ತರ ವಿಭಾಗ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!