Wednesday, September 2, 2026
spot_imgspot_img
spot_imgspot_img

ಬೆಂಗಳೂರಿನಲ್ಲಿ ಮತ್ತೊಂದು ಅವಘಡ; ಮೂರು ಅಂತಸ್ತಿನ ಕಟ್ಟಡ ಕುಸಿತ!

- Advertisement -
- Advertisement -

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಡೇರಿ ಸರ್ಕಲ್ ಬಳಿಯ ಕೆಎಂಎಫ್ ಕ್ವಾಟ್ರರ್ಸ್ ಒಳಗಡೆ ಇರುವ ಮೂರು ಅಂತಸ್ತಿನ ಕಟ್ಟಡ ಇಂದು ಬೆಳಗ್ಗೆ ಕುಸಿದಿದೆ.

ಕುಸಿತಗೊಂಡ ಕಟ್ಟಡ 50 ವರ್ಷದ ಹಳೆಯದ್ದಾಗಿದೆ. ನಿನ್ನೆ ಬಿದ್ದಿದ್ದ ಕಟ್ಟಡದಿಂದ ಅರ್ಧ ಕಿಮೀ ದೂರದಲ್ಲಿ ಇಂದು (ಸೆ.28) ಮತ್ತೊಂದು ಕಟ್ಟಡ ಕುಸಿತಗೊಂಡಿದೆ.

vtv vitla

ಈ ಕಟ್ಟಡದಲ್ಲಿ 18 ಕುಟುಂಬ ವಾಸವಾಗಿತ್ತು. ಕೆಎಂಎಫ್ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳು ಕಟ್ಟಡ ಕುಸಿಯಲು ಆರಂಭವಾಗುತ್ತಿದ್ದಂತೆ ಮನೆಯಿಂದ ಹೊರ ಓಡಿದ್ದಾರೆ. ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!