Wednesday, April 24, 2024
spot_imgspot_img
spot_imgspot_img

ಡೆಲಿವರಿ ಬಾಯ್ ನಿಂದ ಸೆಕ್ಯೂರಿಟಿಗಾರ್ಡ್ ಮೇಲೆ ಹಲ್ಲೆ; ಚಿಕಿತ್ಸೆ ಫಲಕಾರಿಯಾಗದೆ ಸಾವು

- Advertisement -G L Acharya panikkar
- Advertisement -

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ನಿಂದ ಸೆಕ್ಯೂರಿಟಿಗಾರ್ಡ್ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆಗೊಳಗಾಗಿದ್ದ ಸೆಕ್ಯೂರಿಟಿಗಾರ್ಡ್ ಕುಮಾರ್ ನಾಯ್ಕ್(45) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹಲ್ಲೆ ಮಾಡಿದ್ದ ಡೆಲಿವರಿ ಬಾಯ್ ಕಾರ್ತಿಕ್(25)ನನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಜೂನ್ 12ರಂದು ಬೆಂಗಳೂರಿನ ಕೊಡಿಗೆಹಳ್ಳಿಯ ಗೋದ್ರೇಜ್ ಅಪಾರ್ಟ್ಮೆಂಟ್ನಲ್ಲಿ ಆರೋಪಿ ಕಾರ್ತಿಕ್ ಅಡ್ಡಾದಿಡ್ಡಿಯಾಗಿ ಸ್ಕೂಟರ್ ಪಾರ್ಕಿಂಗ್ ಮಾಡಿದ್ದ. ಈ ವೇಳೆ ಕುಮಾರ್ ನಾಯ್ಕ್ ಸೂಕ್ತ ಸ್ಥಳದಲ್ಲಿ ಸ್ಕೂಟರ್ ನಿಲ್ಲಿಸಲು ಹೋಗಿ ಸ್ಕೂಟರ್ ಕೆಳಕ್ಕೆ ಬೀಳಿಸಿದ್ದರು. ಹೀಗಾಗಿ ಸೆಕ್ಯೂರಿಟಿಗಾರ್ಡ್ ಕುಮಾರ್ ನಾಯ್ ಗೆ ಡೆಲಿವರಿ ಬಾಯ್ ಕಾರ್ತಿಕ್ ಹಿಗ್ಗಾಮುಗ್ಗ ಥಳಿಸಿದ್ದ. ಈ ವೇಳೆ ಕುಮಾರ್ ನಾಯ್ಕ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. 9 ದಿನದ ಬಳಿಕ ಚಿಕಿತ್ಸೆ ಫಲಿಸದೆ ಕುಮಾರ್ ನಾಯ್ಕ್ ಮೃತಪಟ್ಟಿದ್ದಾರೆ. ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

- Advertisement -

Related news

error: Content is protected !!