- Advertisement -
- Advertisement -
ಬೆಂಗಳೂರು: ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ದಂಪತಿಗಳಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಅರೆನಗ್ನ ಸ್ಥಿತಿಯಲ್ಲಿ ಅಪ್ರಾಪ್ತ ಯುವತಿಯ ಶವ ಪತ್ತೆ!
ಆರೋಪಿಗಳು ಪಂಜಾಬ್ ಮೂಲದವರಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿಯೇ ವಾಸವಾಗಿದ್ದರು.
ಹಲವು ಪದವಿಗಳ ನಕಲಿ ಮಾರ್ಕ್ಸ್ ಕಾರ್ಡ್ ಗಳನ್ನು ನೀಡುತ್ತಿದ್ದರಲ್ಲದೇ ಒಂದು ಪದವಿ ಮಾರ್ಕ್ಸ್ ಕಾರ್ಡ್ ಗೆ 60-70 ಸಾವಿರ ರೂಪಾಯಿ ಪಡೆಯುತ್ತಿದ್ದರು.
ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಚಕಮಕಿ; ಓರ್ವ ಉಗ್ರನ ಹತ್ಯೆ
ರವೀಂದ್ರನಾಥ್ ಟ್ಯಾಗೋರ್ ವಿಶ್ವವಿದ್ಯಾಲಯ, ಅಸೆಟ್ ವಿವಿ, ಸಿ.ವಿ. ರಾಮನ್ ವಿವಿಗಳಿಗೆ ಸೇರಿದ ಮಾರ್ಕ್ಸ್ ಕಾರ್ಡ್ ಗಳನ್ನು ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.
- Advertisement -