ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಡಿಜೆ ಹಳ್ಳಿ ಪೊಲೀಸ ತನಿಖೆ ವೇಳೆ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ಸಿಕ್ಕಿದ್ದು, ಎಸ್ಡಿಪಿಐ ಪಕ್ಷದಿಂದ ವಾರ್ಡ್ ನಂಬರ್ 60ರ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮುಜಾಮಿಲ್ ಪಾಷ ಎನ್ನಲಾಗಿದೆ.
ಮುಜಾಮಿಲ್ ಪಾಷ, ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಾಲಗಿರುವ ಗಲಭೆ ಪ್ರಕರಣದ ಎ ಒನ್ ಅರೋಪಿ ಎನ್ನಲಾಗಿದೆ. ಸದ್ಯ ಆತನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಹಿರಿಯ ಆಧಿಕಾರಿಗಳ ನೇತೃತ್ವದಲ್ಲಿ ತನಿಖೆ
ಡಿಜೆ ಹಳ್ಳಿ ಗಲಭೆ ಸಂಬಂಧ ಹಿರಿಯ ಆಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು ಹಾಗೂ ಓರ್ವ ಡಿಸಿಪಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಪ್ರಕರಣದ ಹಿಂದೆ ಯಾವ ಸಂಘಟನೆ ಹಾಗೂ ಯಾರ ಕೈವಾಡ ಇದೆ ಎಂಬುದರ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಕೆಲವು ರೌಡಿಗಳು ಘಟನೆಯಲ್ಲಿ ಭಾಗಿಯಾಗಿರೋ ಬಗ್ಗೆ ಸಂಶಯ ವ್ಯಕ್ತವಾಗಿದೆ. ಹಳೇ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಪಟ್ಟಿ ಮಾಡಿ ಬಂಧನಕ್ಕೆ ಬಲೆ ಬೀಸಲಾಗಿದೆ.
