Sunday, July 26, 2026
spot_imgspot_img
spot_imgspot_img

ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ – ಆರೋಪಿಯ ಬಂಧನ !

- Advertisement -
- Advertisement -

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಚಂದನ್ ಎನ್ನುವ ಯುವಕ ತನ್ನ ತಾಯಿ ಉಪನ್ಯಾಸಕಿಯಾಗಿ ಕೆಲಸ ಮಾಡುವ ಕಾಲೇಜಿನ ಹುಡುಗಿಯೊಂದಿಗೆ ಪರಿಚಯ ಮಾಡಿಕೊಂಡಿದ್ದ. ಬಳಿಕ ಪ್ರೀತಿಸುವುದಾಗಿ ಹೇಳಿ, ಮದುವೆಯಾಗುತ್ತೇನೆ ಎಂದು ಲೈಂಗಿಕ ಸಂಬಂಧ ಬೆಳೆಸಿದ್ದನು. ಆಕೆ ಎರಡು ಬಾರಿ ಗರ್ಭಿಣಿಯಾದಾಗಲೂ ಗರ್ಭಪಾತ ಮಾಡಿಸಿದ‌ ಯುವಕ, ಆಕೆಯಿಂದ 6 ಲಕ್ಷ ರೂ. ಹಣ ಕೂಡ ಪಡೆದು ಈಗ ಮದುವೆಯಾಗದೆ ವಂಚಿಸಿದ್ದಾನೆ ಎನ್ನಲಾಗಿದೆ.

ವಂಚನೆಗೊಳಗಾದ ವಿದ್ಯಾರ್ಥಿನಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಚಂದನ್’‌ ನನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!