Monday, June 8, 2026
spot_imgspot_img
spot_imgspot_img

ಸೈಬರ್​​ ಕ್ರೈಂ ವಿಭಾಗದ ಹೆಡ್​​ ಕಾನ್ಸ್​​ಟೇಬಲ್ ಆತ್ಮಹತ್ಯೆಗೆ ಶರಣು!

- Advertisement -
- Advertisement -

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೆಡ್ ಕಾನ್ ಸ್ಟೇಬಲ್ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಮೃತರನ್ನು ಗಿರಿನಗರ ಪೊಲೀಸ್ ಠಾಣೆಯ ಸೈಬರ್ ಕ್ರೈಂ ವಿಭಾಗದಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಸದಾಶಿವ (47) ಎನ್ನಲಾಗಿದೆ.

ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದ ಸದಾಶಿವ ಸೇನೆಯಲ್ಲಿ ನಿವೃತ್ತಿ ಆದ ನಂತರ ಪೊಲೀಸ್ ಇಲಾಖೆಗೆ ಸೇರಿದ್ದರು. ವಿಜಯನಗರ ಠಾಣೆಯಲ್ಲಿ 8 ವರ್ಷ ಕೆಲಸ ಮಾಡಿದ್ದರು. ಬಳಿಕ ಸಿಸಿಬಿ ಸೈಬರ್ ಕ್ರೈಂನಲ್ಲಿ‌ ಕಾರ್ಯ ನಿರ್ವಹಿಸುತ್ತಿದ್ದರು.

ನಿನ್ನೆ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬಸ್ಥರು ಬೆಳಿಗ್ಗೆ ಬಂದು ನೋಡಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಘಟನೆ ಬಗ್ಗೆ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!