Friday, April 19, 2024
spot_imgspot_img
spot_imgspot_img

ಬೆಂಗಳೂರು ಭಾರೀ ಮಳೆಗೆ ನದಿಯಂತಾದ ರಸ್ತೆಗಳು

- Advertisement -G L Acharya panikkar
- Advertisement -

ಬೆಂಗಳೂರು: ಬೆಂಗಳೂರು ನಗರದ್ಯಾದ್ಯಂತ ಮಧ್ಯಾಹ್ನದಿಂದ ರಾತ್ರಿಯವರೆಗೆ ಬಿಟ್ಟು ಬಿಡದೇ ಬಾರೀ ಮಳೆಯಾಗಿದೆ. ಮಳೆಯಿಂದಾಗಿ ನಗರದ ಜನಜೀವನ ಅಸ್ತವ್ಯಸ್ತ ಆಗಿದೆ.

ಟ್ರಾಫಿಕ್ ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಮೆಜೆಸ್ಟಿಕ್, ನಾಗರಬಾವಿ, ಶಾಂತಿನಗರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್​, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜ ಪೇಟೆ, ಶ್ರೀರಾಂಪುರ, ರಾಜಾಜಿನಗರ, ಆರ್​ ಆರ್​ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಆಗಿದೆ.

ಇನ್ನು, ಅಬ್ಬರದ ಮಳೆಗೆ ರಸ್ತೆಗಳೆಲ್ಲ ಬಹುತೇಕ ನದಿಗಳಂತಾಗಿವೆ. ಸದ್ಯ ಮನೆಯಿಂದ ಯಾರು ಹೊರಗೆ ಬಾರದೇ ಇರುವುದರಿಂದ ಅಷ್ಟೊಂದು ಸಮಸ್ಯೆ ಉಂಟಾಗಿಲ್ಲ. ಭಾರೀ ಮಳೆಯಿಂದಾಗಿ ನಗರದ ಬಹುತೇಕ ಕಡೆಗಳಲ್ಲಿ ವಿದ್ಯುತ್​ ವ್ಯತ್ಯಯ ಉಂಟಾಗಿದೆ.

- Advertisement -

Related news

error: Content is protected !!