Monday, May 6, 2024
spot_imgspot_img
spot_imgspot_img

ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ!

- Advertisement -G L Acharya panikkar
- Advertisement -

ಬೆಂಗಳೂರು : ಯಾಸ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಿರಲಿದೆ ಎನ್ನಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

driving

ಕರಾವಳಿ ಭಾಗದಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದ್ದು, ವಿಶೇಷ ಪೂರ್ವ ಮುಂಗಾರಿನ ಪ್ರಭಾವದಿಂದಾಗಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೇ 29ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ಪ್ರಭಾವದಿಂದಾಗಿ ಮೇ 26 ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಮಳೆಯಿಂದಾಗಿ ಅಪಾರ ಹಾನಿಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

Related news

error: Content is protected !!