Thursday, July 3, 2025
spot_imgspot_img
spot_imgspot_img

ಬೆಂಗಳೂರು ಕಂಬಳ- ನಮ್ಮ ಕಂಬಳ; ಕಂಬಳ ಸಮಿತಿಯಿಂದ ಪೂರ್ವಭಾವಿ ಸಭೆ- ಭರದ ಸಿದ್ಧತೆ

- Advertisement -
- Advertisement -

ತುಳುನಾಡಿನ ಜಾನಪದ ಕ್ರೀಡೆ ಕಂಬಳ ಕರಾವಳಿಯ ಗಡಿಯನ್ನೂ ಮೀರಿ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.25 ಮತ್ತು 26ರಂದು ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯೂ ಇಂದು ಬೆಂಗಳೂರಿನಲ್ಲಿ ನಡೆಯಿತು.

ಪುತ್ತೂರು ಶಾಸಕ ಅಶೋಕ್ ಕುಮಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆದಿದ್ದು ಸಭೆಯಲ್ಲಿ ಉದ್ಯಮಿ ಬಿ ಗುಣರಂಜನ್ ಶೆಟ್ಟಿ ಮತ್ತು ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಗುರುಕಿರಣ್ ಭಾಗವಹಿಸಿದ್ದರು.

ಕರಾವಳಿಯ ಗಂಡುಕಲೆ, ಸಾಂಸ್ಕೃತಿಕ ಕ್ರೀಡೆ ಕಂಬಳ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.25 ಮತ್ತು 26ರಂದು ನಡೆಯಲಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಿಂದ ಸುಮಾರು 130 ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಕಂಬಳದಲ್ಲಿ ಸುಮಾರು 7ರಿಂದ 8 ಲಕ್ಷದಷ್ಟು ಜನರು ಭಾಗವಹಿಸಿ ಕಂಬಳ ವೀಕ್ಷಣೆ ಮಾಡುವ ನಿರೀಕ್ಷೆ ಇದ್ದು ಇದಕ್ಕಾಗಿ ಎಲ್ಲಾ ತಯಾರಿಗಳನ್ನು ಭರದಿಂದ ಮಾಡಲಾಗುತ್ತಿದೆ.

- Advertisement -

Related news

error: Content is protected !!