Thursday, May 2, 2024
spot_imgspot_img
spot_imgspot_img

ಬೆಂಗಳೂರು ಕಂಬಳ ಸಮಿತಿ ಗೌರವಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್

- Advertisement -G L Acharya panikkar
- Advertisement -

ಬೆಂಗಳೂರು : ರಾಜಧಾನಿಯಲ್ಲಿ ನವೆಂಬರ್ 25/26 ರಂದು ನಡೆಯಲಿರುವ ಕರಾವಳಿಯ ಜನಪ್ರಿಯ ಕ್ರೀಡೆ ಬೆಂಗಳೂರು ಕಂಬಳದ ಕರೆ ಪೂಜೆ ಇಂದು ನೆರವೇರಿತು.

ಈ ಸಂದರ್ಭದಲ್ಲಿ ಬೆಳಿಗ್ಗೆಯಿಂದ ಪೂಜಾ ವಿಧಿವಿಧಾನಗಳು ನಡೆದಿದ್ದು ನಂತರ ಕರೆ ಪೂಜೆ ಕಾರ್ಯಕ್ರಮ ನೆರವೇರಿತು. ಬಳಿಕ ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಬೆಂಗಳೂರು ಕಂಬಳ ಸಮಿತಿಯ ಗೌರವಧ್ಯಕ್ಷರಾಗಿ ಕರ್ನಾಟಕ ಸರಕಾರದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮತ್ತು ಎಂ.ಆರ್.ಜಿ. ಗ್ರೂಪ್ಸ್ ನ ಕೆ. ಪ್ರಕಾಶ್ ಶೆಟ್ಟಿ ಯವರನ್ನು ಗೌರವಪೂರ್ವಕವಾಗಿ ಆಯ್ಕೆ ಮಾಡಲಾಯಿತು.

ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷರಾಗಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷರಾಗಿ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ , ಉಪಾಧ್ಯಕ್ಷರಾಗಿ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು, ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರು, ಖ್ಯಾತ ನಟಿ ಅನುಷ್ಕಾ ಶೆಟ್ಟಿ ಯವರ ಸಹೋದರ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಯವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಯಿತು.

ಸಂಘಟನಾ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷರಾದ ಬೆಳಪು ದೇವಿಪ್ರಸಾದ್ ಶೆಟ್ಟಿ ಮತ್ತು ಕಾರ್ಪೊರೇಟರ್ ಉಮೇಶ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಸಂಯೋಜಕರಾಗಿ ತುಳು ಕೂಟ ಬೆಂಗಳೂರು ಇದರ ಅಧ್ಯಕ್ಷರಾದ ಸುಂದರ್ ರಾಜ್ ರೈ ಮತ್ತು ಅಕ್ಷಯ್ ರೈ ದಂಬೆಕಾನ ಇವರು ಆಯ್ಕೆಯಾದರು.

ಇನ್ನು ಬೆಂಗಳೂರು ಕಂಬಳದ ವಿವಿದ ಸಮಿತಿ ಗಳು ರಚನೆಯಾಗಲಿದ್ದು ಬೆಂಗಳೂರು ಕಂಬಳದ ಮೆರುಗನ್ನು ಹೆಚ್ಚಿಸಲಿದೆ.

ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ, ಮಾಜಿ ಮಂತ್ರಿ ಅಶ್ವಥ್ ನಾರಾಯಣ್, ಶಾಸಕ ರಿಸ್ವಾನ್ ಹರ್ಷದ್, ಶಾಸಕ ಎನ್ ಎ ಹಾರಿಸ್, ಉದ್ಯಮಿ ಉಮ್ಮರ್ ಟಿ ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

- Advertisement -

Related news

error: Content is protected !!