Wednesday, July 29, 2026
spot_imgspot_img
spot_imgspot_img

ಲಾಕ್ ಡೌನ್ ವಿಸ್ತರಣೆ ಕುರಿತು ನಾಳೆ ಸಚಿವ ಸಂಪುಟ ಸಭೆ; ಮುಖ್ಯಮಂತ್ರಿ ಯಡಿಯೂರಪ್ಪ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ವಿಸ್ತರಣೆ ಕುರಿತಂತೆ ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವ ಸಂಪುಟ ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ. ಇಂದು ಸಂಜೆ ವೇಳೆ ಎಲ್ಲ ಮಾಹಿತಿ ಸಿಗಲಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈಗಾಗಲೇ ಮೇ. 24 ರವರೆಗೆ ಲಾಕ್ ಡೌನ್ ಘೋಷಿಸಿದ್ದು, ಕೊರೊನಾ ನಿಯಂತ್ರಣ ಸಂಬಂಧ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

- Advertisement -

Related news

error: Content is protected !!