Monday, August 31, 2026
spot_imgspot_img
spot_imgspot_img

ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು : ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘೋರ ದುರಂತವೊಂದು ಸಂಭವಿಸಿದೆ. ಬೆಂಗಳೂರಿನ ಹೊರಮಾವು ಸೇತುವೆ ಸಮೀಪ ಈ ಘಟನೆ ನಡೆದಿದ್ದು ಮೃತರನ್ನು ಚೈತನ್ಯ (19) ಮತ್ತು ಸಿರೀಶ್ (20) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಕಾಕಿನಾಡ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಇವರಿಬ್ಬರು ಪ್ರೇಮ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು, ಸದ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!