- Advertisement -
- Advertisement -



ದೇವನಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣಕ್ಕೆ ಬಂದು ಹೋಗುತ್ತಿದ್ದ ಬಸ್ ಅಪಘಾತವಾಗಿದ್ದು ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ನಡೆದಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 20 ಜನರಿಗೆ ಗಾಯಗಳಾಗಿವೆ.
ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಮದುವೆ ಮುಗಿಸಿ ವಾಪಸ್ ಆಗುತ್ತಿರುವಾಗ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 20 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬೆಂಗಳೂರು, ಗೌರಿಬಿದನೂರು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.



- Advertisement -








