Monday, June 8, 2026
spot_imgspot_img
spot_imgspot_img

ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ..!

- Advertisement -
- Advertisement -

ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗುಜರಾತ್ ಮೂಲದ ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ.ಭಾಸ್ಕರ್ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದ.

ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ನಿನ್ನೆ ರಾತ್ರಿ 9.30ರ ವೇಳೆ ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!