Thursday, May 2, 2024
spot_imgspot_img
spot_imgspot_img

ರಾಜ್ಯದಲ್ಲಿ ಕೋವಿಡ್ ಪತ್ತೆಗೆ ಸಿಂಡ್ರೋಮಿಕ್ ಅಪ್ರೋಚ್ ಅನುಸರಣೆ – ಆರೋಗ್ಯ ಸಚಿವ ಡಾ.ಕೆ ಸುಧಾಕರ್

- Advertisement -G L Acharya panikkar
- Advertisement -

ಬೆಂಗಳೂರು: ಕೊರೊನಾ ರೋಗ ಲಕ್ಷಣವಿದ್ದರೂ ಪರೀಕ್ಷೆಯಲ್ಲಿ ನೆಗೆಟಿವ್ ಕಂಡುಬರುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಸಿಂಡ್ರೋಮಿಕ್ ವಿಧಾನ ಅನುಸರಿಸಿ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಲಾಗಿದೆ ಎಂದುಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಹಲವು ಪ್ರಕರಣಗಳಲ್ಲಿ ಆರ್​​ಟಿಪಿಸಿಆರ್ ಹಾಗೂ ಆ್ಯಂಟಿಜೆನ್ ಪರೀಕ್ಷೆ ಮಾಡಿಸಿದರೂ ನೆಗೆಟಿವ್ ವರದಿ ಬರುತ್ತಿದೆ. ವ್ಯಕ್ತಿಗೆ ಕೋವಿಡ್ ರೋಗ ಲಕ್ಷಣವಿದ್ದರೂ ವರದಿಯಲ್ಲಿ ನೆಗೆಟಿವ್ ಬರುವುದರಿಂದ, ರೋಗ ತೀವ್ರತೆ ಹೆಚ್ಚಾದ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲು ಸಮಸ್ಯೆಯಾಗುತ್ತದೆ.

ಈ ಸಮಸ್ಯೆಯನ್ನು ನಿವಾರಿಸಲು ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಸಿಂಡ್ರೋಮಿಕ್ ಅಪ್ರೋಚ್ ಅನುಸರಿಸಲು ತೀರ್ಮಾನಿಸಲಾಗಿದೆ. ಅಂತಹ ಪ್ರಕರಣಗಳಲ್ಲಿ ವೈದ್ಯರ ಆಥರೈಸೇಷನ್ ಆಧರಿಸಿ, ಆಸ್ಪತ್ರೆಗೆ ದಾಖಲಿಸಲು ಮತ್ತು ಚಿಕಿತ್ಸೆಗಾಗಿ ಪೇಷಂಟ್ ನಂಬರ್ ನೀಡಲು ನಿರ್ಧರಿಸಲಾಗಿದೆ. ಇದರಿಂದ ಸೋಂಕಿತರನ್ನು ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲು ಮತ್ತು ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ವಿಶೇಷವಾಗಿ SAST ರೆಫರೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವವರಿಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಿಂಡ್ರೋಮಿಕ್ ಅಪ್ರೋಚ್ ಅನುಸರಣೆ ಮಾಡಬೇಕೆಂದು ಈಗಾಗಲೇ ಆಸ್ಪತ್ರೆಗಳಿಗೆ ಹಾಗೂ ಆರೋಗ್ಯಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

driving
- Advertisement -

Related news

error: Content is protected !!