Sunday, June 29, 2025
spot_imgspot_img
spot_imgspot_img

ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ, ಮಗು ಮೃತ್ಯು

- Advertisement -
- Advertisement -

ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದು ತಾಯಿ ಮತ್ತು ಮಗು ಸಜೀವ ದಹನಗೊಂಡ ಘಟನೆ ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಓ ಫಾರ್ಮ್ ಬಳಿ ನಡೆದಿದೆ.

ಮೃತರನ್ನು ಓ ಫಾರ್ಮ್ ಸರ್ಕಲ್ ನ ಗೋಪಾಲನ್ ಕಾಲನಿಯ ನಿವಾಸಿಗಳಾದ ಸೌಂದರ್ಯ(23) ಮತ್ತು ಅವರ ಪುತ್ರಿ ಸುವಿಕ್ಷ ಲಿಯ(9 ತಿಂಗಳು) ಎಂದು ಗುರುತಿಸಲಾಗಿದೆ. ತಮಿಳುನಾಡಿಗೆ ತೆರಳಿದ್ದ ಸೌಂದರ್ಯ ಮತ್ತು ಅವರ ಪುತ್ರಿ ಲೀಲಾ ಇಂದು ಬೆಳಗ್ಗೆ ಆರು ಗಂಟೆ ಸುಮಾರಿಗೆ ಬಸ್ಸಿನಲ್ಲಿ ಬೆಂಗಳೂರಿಗೆ ಬಂದಿಳಿದಿದ್ದರು. ಬಳಿಕ ತಾಯಿ-ಮಗಳು ಫುಟ್ ಪಾತ್ ನಲ್ಲಿ ನಡೆದುಕೊಂಡು ಮನೆಯತ್ತ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ವಿದ್ಯುತ್‌ ಪ್ರವಹಿಸುತ್ತಿದ್ದ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದರೂ ವಿದ್ಯುತ್ ಸಂಪರ್ಕ ಮೊಟಕುಗೊಂಡಿರಲಿಲ್ಲ. ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗಳು ಈ ತಂತಿಯನ್ನು ಗಮನಿಸದೆ ತುಳಿದ ಪರಿಣಾಮ ಅವರಿಬ್ಬರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಕಾಡುಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಾಡುಗೋಡಿ ಠಾಣಾ ಪೊಲೀಸರು, ಸಂಬಂಧಿಸಿದ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

- Advertisement -

Related news

error: Content is protected !!