Monday, July 20, 2026
spot_imgspot_img
spot_imgspot_img

ಇಂದು ಪಿಯುಸಿ ಫಲಿತಾಂಶ ಪ್ರಕಟ!

- Advertisement -
- Advertisement -

ಬೆಂಗಳೂರು: ಬಹು ನಿರೀಕ್ಷೆಯಿಂದ ಕಾಯುತ್ತಿರುವ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಇಂದು (ಜುಲೈ 20ರಂದು) ಪ್ರಕಟಿಸಲಾಗುತ್ತಿದೆ.

ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಇಂದು ಫಲಿತಾಂಶ ಪ್ರಕಟವಾಗಲಿದ್ದು, ಸಂಜೆ 4.30 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಇದಾಗಲೇ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಅವರು ತಿಳಿಸಿರುವಂತೆ ಎಸ್​ಎಸ್​ಎಲ್​ಸಿ ಮತ್ತು ಪ್ರಥಮ ಪಿಯುಸಿ ಅಂಕಗಳು ಹಾಗೂ ಇಂಟರ್ನಲ್ ಅಸೆಸ್​ಮೆಂಟ್​ ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ.

ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯದ ಹಿನ್ನೆಲೆಯಲ್ಲಿ ನೋಂದಣಿ ನಂಬರ್ ಸಿಕ್ಕಿಲ್ಲ. ಆದ್ದರಿಂದ ಫಲಿತಾಂಶ ನೋಡುವ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸ ರಿಜಿಸ್ಟರ್ ನಂಬರ್ ಜನರೇಟ್ ಮಾಡಿದ್ದು, ವೆಬ್ ತಾಣದಲ್ಲಿ know your Number ಆಯ್ಕೆ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು. ವಿದ್ಯಾರ್ಥಿಗಳಿಗೆ ಎಸ್‌ಎಂಎಸ್ ಮೂಲಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನೀಡಲಾಗುವುದು. ಆಯಾ ಕಾಲೇಜುಗಳಿಗೆ ಫಲಿತಾಂಶದ ವಿವರದ ಪಟ್ಟಿ ಹೋಗಲಿದ್ದು, ಫಲಿತಾಂಶದ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಖಚಿತ ಪಡಿಸಿಕೊಂಡು, ಜನರೇಟ್ ಆದ ರಿಜಿಸ್ಟರ್ ನಂಬರ್ ಪರಿಶೀಲಿಸಿ ಫಲಿತಾಂಶವನ್ನು ನೋಡಬಹುದಾಗಿದೆ. ವೆಬ್​ಸೈಟ್​ ವಿವರ: http://karresults.nic.in

- Advertisement -

Related news

error: Content is protected !!