ಬೆಂಗಳೂರು: ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಸ್ಪೋಟಕ ಮಾಹಿತಿಯೊಂದನ್ನು ನೀಡಿದ್ದಾರೆ.
ಸಂತ್ರಸ್ತೆ ಆರೋಪಿಗಳಿಗೆ 5 ಲಕ್ಷ ರೂಪಾಯಿ ನೀಡಬೇಕಾಗಿತ್ತು ಅನ್ನೋ ಮಾಹಿತಿ ಬಹಿರಂಗವಾಗಿದ್ದು, ನಿರ್ಭಯ ಪ್ರಕರಣದಂತೆಯೇ ಬೆಂಗಳೂರಲ್ಲಿ ನಡೆದಿದ್ದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಈಗಾಗಲೇ ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆಯ ವೇಳೆಯಲ್ಲಿ ಆರೋಪಿಗಳು ಹಲವು ಮಾಹಿತಿಗಳನ್ನು ಬಾಯ್ಬಿಟ್ಟಿದಾರೆನ್ನಲಾಗಿದೆ.
ಸಂತ್ರಸ್ತ ಮಹಿಳೆ ಕೂಡ ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿದ್ದು, ಆರೋಪಿಗಳಿಂದ ಆಕೆ ಮುಂಗಡವಾಗಿ 5 ಲಕ್ಷ ರೂ ಹಣ ಪಡೆದಿದ್ದಾಳೆ. ಆದರೆ ಕಳೆದ ಕೆಲವು ತಿಂಗಳಿಂದ ಆಕೆ ಹಣ ವಾಪಸ್ ಮಾಡಿರಲಿಲ್ಲ, ಅಲ್ಲದೇ ಹಣ ನೀಡಲು ನಿರಾಕರಿಸಿದ್ದಾಳೆ. ಆರೋಪಿಗಳಾದ ನಸರತ್ ಮತ್ತು ಕಾಜಲ್ ಸಂತ್ರಸ್ತೆಯನ್ನು ಪತ್ತೆಹಚ್ಚಿದ್ದು, ಅಲ್ಲದೇ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಅನ್ನೋದನ್ನು ಪೊಲೀಸರ ತನಿಖೆಯ ವೇಳೆ ಒಪ್ಪಿಕೊಂಡಿದ್ದಾರೆ.
ಇನ್ನು ಸಾಮೂಹಿಕ ಅತ್ಯಾಚಾರದ ವೇಳೆಯಲ್ಲಿ ಇಬ್ಬರೂ ವಿಡಿಯೋ ಶೂಟಿಂಗ್ ಮಾಡಿದ್ದಾರೆನ್ನುವ ಮಾಹಿತಿ ಬಹಿರಂಗವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಇಂದು ಮ್ಯಾಜಿಸ್ಟ್ರೇಟ್ ಮುಂದೆ ತನ್ನ ಹೇಳಿಕೆಯನ್ನು ದಾಖಲಿಸಲಿದ್ದಾಳೆ. ಅಲ್ಲದೇ ಆರೋಪಿಗಳನ್ನು ಕೂಡ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.