Friday, June 26, 2026
spot_imgspot_img
spot_imgspot_img

ಬೆಂಗಳೂರು: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಖಾಸಗಿ ಭಾಗಕ್ಕೆ ಬಾಟಲ್ ತುರುಕಿ ವಿಡಿಯೋ ವೈರಲ್: ಓರ್ವ ಮಹಿಳೆ ಸೇರಿ ಐವರು ವಿಕೃತ ಕಾಮುಕರ ಬಂಧನ..!

- Advertisement -
- Advertisement -

ಬೆಂಗಳೂರು: ಯುವತಿಯೊಬ್ಬಳ ಮೇಲೆ ಮಹಿಳೆಯೊಬ್ಬಳ ಸಹಿತ ಐವರು ಪೈಶಾಚಿಕ ಕೃತ್ಯ ಎಸಗಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಲೇ ಪ್ರಕರಣವನ್ನು ಬೇಧಿಸಿದ ಬೆಂಗಳೂರಿನ ರಾಮಮೂರ್ತಿ ನಗರ ಪೋಲಿಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನ ರಾಮಮೂರ್ತಿ ನಗರದ ಎನ್.ಆರ್.ಐ ಲೇಔಟ್ ನಲ್ಲಿ ಕಳೆದ 6 ದಿನಗಳ ಹಿಂದೆ ನಡೆದಿರುವ ಘಟನೆ ಇದಾಗಿದ್ದು, ಸಂತ್ರಸ್ತೆಯು 22 ವರ್ಷದ ಬಾಂಗ್ಲಾದೇಶದ ಯುವತಿಯಾಗಿದ್ದಾಳೆ.

ಬಂಧಿತರೆಲ್ಲರೂ ಬಾಂಗ್ಲಾದೇಶದವರಾಗಿದ್ದು, ಅಕ್ರಮವಾಗಿ ಭಾರತಕ್ಕೆ ಬಂದು ನೆಲೆಸಿದವರಾಗಿದ್ದಾರೆ. ಓರ್ವ ಯುವತಿ, ಸಾಗರ್, ರಿದಾಯ್ ಬಾಬು, ಮೊಹಮ್ಮದ್ ಬಾಬಾಶೇಕ್, ಹೈದರಾಬಾದ್‌ನ ಹಕೀಲ್ ಬಂಧಿತ ಆರೋಪಿಗಳು. ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅತ್ಯಾಚಾರ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಅಲ್ಲದೇ ಮರ್ಮಾಂಗಕ್ಕೆ ವಿಸ್ಕಿ ಬಾಟಲಿಯನ್ನು‌‌ ತುರುಕಿ ವಿಕೃತಿ ಮೆರೆದಿದ್ದರು.

ಆರೋಪಿಗಳು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದು, ಸಂತ್ರಸ್ತೆಯ ಮೇಲಿನ ದ್ವೇಷದಿಂದ ಓರ್ವ ಯುವತಿ ಜತೆಗೆ ನಾಲ್ವರು ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದರು.

ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲೂ ಕೂಡ ಈ ವಿಡಿಯೋ ವೈರಲ್ ಆಗಿತ್ತು. ಅಸ್ಸಾಂ ರಾಜ್ಯದ ಪೊಲೀಸರಿಂದ ವಿಡಿಯೋ ಕುರಿತು ತನಿಖೆ ನಡೆಸಿದಾಗ ಕೃತ್ಯದಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಭಾಗಿಯಾರುವುದು ಬೆಳಕಿಗೆ ಬಂದಿತ್ತು. ಆ ನಂತರ ಸಂತ್ರಸ್ತೆಯ ಕುಟುಂಬದ ಸದಸ್ಯರನ್ನು ಪತ್ತೆ ಮಾಡಿದ್ದ ಬಾಂಗ್ಲಾ ಪೊಲೀಸರು ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅವಲಹಳ್ಳಿಯ ಮಾರ್ಗೊಂಡಹಳ್ಳಿಯಲ್ಲಿ ಆರೋಪಿಗಳು ತಲೆಮರೆಸಿಕೊಂಡಿರುವುದು ಪತ್ತೆ ಹಚ್ಚಿ ಬಂಧಿಸಿದ ರಾಮಮೂರ್ತಿ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಅತ್ಯಾಚಾರವೆಸಗಿದ್ದ ಆರೋಪಿಗಳ ವಿರುದ್ಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಿಸಲಾಗಿದ್ದು, ಆರೋಪಿಗಳ ವಿರುದ್ಧ ಸೆಕ್ಷನ್ 376(D), 67 ಐಟಿ ಆ್ಯಕ್ಟ್ 14 ಫಾರಿನರ್ಸ್ ಆ್ಯಕ್ಟ್​​ನಡಿ ಎಫ್‌ಐಆರ್ ದಾಖಲಿಸಲಾಗಿದೆ.

driving
- Advertisement -

Related news

error: Content is protected !!