Tuesday, May 14, 2024
spot_imgspot_img
spot_imgspot_img

ಮುರುಡೇಶ್ವರದ ಹರಿಕಾರ ಆರ್. ಎನ್ ಶೆಟ್ಟಿ ವಿಧಿವಶ

- Advertisement -G L Acharya panikkar
- Advertisement -

ಬೆಂಗಳೂರು: ಖ್ಯಾತ ಉದ್ಯಮಿ ಆರ್​.ಎನ್​. ಶೆಟ್ಟಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಆರ್​.ಎನ್​.ಎಸ್​ ಶಿಕ್ಷಣ ಸಂಸ್ಥೆಗಳ ಸ್ಥಾಪಕರೂ ಆಗಿರುವ ಆರ್​.ಎನ್. ಶೆಟ್ಟಿ (92) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

1928ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮುರುಡೇಶ್ವರದಲ್ಲಿ ಹುಟ್ಟಿದ ಆರ್​.ಎನ್. ಶೆಟ್ಟಿ ಉದ್ಯಮಿಯಾಗಿ ಯಶಸ್ವಿಯಾದರು. ತಮ್ಮ ಹುಟ್ಟೂರಾದ ಮುರುಡೇಶ್ವರದಲ್ಲಿ ಸಮುದ್ರ ತೀರದಲ್ಲಿ ಬೃಹತ್ ಶಿವನ ಮೂರ್ತಿ, ಎತ್ತರದ ರಾಜಗೋಪುರವನ್ನು ಸ್ಥಾಪಿಸಿ, ಮುರುಡೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಆ ಜಾಗವನ್ನು ಪ್ರವಾಸಿ ತಾಣವನ್ನಾಗಿ ರೂಪಿಸಿದ ಹೆಗ್ಗಳಿಕೆಯೂ ಆರ್​.ಎನ್. ಶೆಟ್ಟಿ ಅವರದ್ದೇ.

View Post

ಆರ್​.ಎನ್​. ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ. ಕೃಷಿಕ ಮನೆತನದಲ್ಲಿ ಹುಟ್ಟಿದ ಆರ್​.ಎನ್. ಶೆಟ್ಟಿ ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ, ಹೋಟೆಲ್ ಉದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಜೊತೆಗೆ ಶಿಕ್ಷಣ ಕ್ಷೇತ್ರಕ್ಕೂ ತಮ್ಮ ಕೊಡುಗೆ ನೀಡಿದ್ದರು. ಅವರ ಆತ್ಮಕ್ಕೆ ದೇವರು ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬಸ್ಥರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!