Tuesday, June 9, 2026
spot_imgspot_img
spot_imgspot_img

ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆಲ್ಲ ಚಾಕು ಇರಿತ: ಓರ್ವ ಬಲಿ

- Advertisement -
- Advertisement -

ಬೆಂಗಳೂರು: ಮಾನಸಿಕ ಅಸ್ವಸ್ಥನೆಂದು ಶಂಕಿಸಲಾಗಿರುವ ವ್ಯಕ್ತಿಯೊಬ್ಬ ಎದುರಿಗೆ ಕಂಡ ಎಲ್ಲರಿಗೂ ಚಾಕುವಿನಿಂದ ಇರಿದು ಹತ್ಯೆ ಮಾಡಲು ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿನ್ನಿಮಿಲ್ ಸಮೀಪದ ಬಾಳೆ ಮಂಡಿಯಲ್ಲಿ ಈ ಘಟನೆ ಸಂಭವಿಸಿದೆ.

ಆರೋಪಿ ಗಣೇಶ್ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಮಾಂಸದ ಅಂಗಡಿಗೆ ತೆರಳಿದ್ದ ವೇಳೆ ಅಲ್ಲಿದ್ದ ಚಾಕು ವಶಪಡಿಸಿದ ಗಣೇಶ್ ಎದುರುಗಡೆ ಬಂದ ಎಲ್ಲರ ಮೇಲೂ ಹಲ್ಲೆ ನಡೆಸಲು ಯತ್ನಿಸಿದ್ದ ಎಂದು ಹೇಳಲಾಗಿದೆ. ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇತರ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ.

ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಡಿಸಿಪಿ ಸಂಜೀವ್ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!