Friday, April 26, 2024
spot_imgspot_img
spot_imgspot_img

ಐಎಂಎ ಹಗರಣ: ಸಿಬಿಐನಿಂದ ಮಾಜಿ ಸಚಿವ ರೋಷನ್ ಬೇಗ್ ತೀವ್ರ ವಿಚಾರಣೆ

- Advertisement -G L Acharya panikkar
- Advertisement -

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಸಿಬಿಐ ಇಂದು ಮಾಜಿ ಸಚಿವ ರೋಷನ್ ಬೇಗ್ ಅವರನ್ನು ತೀವ್ರ ವಿಚಾರಣೆಗೆ ಗುರಿಪಡಿಸಿದೆ. ನ್ಯಾಯಾಲಯ ಬೇಗ್ ಅವರನ್ನು ಒಂದು ದಿನದ ಅವಧಿಗೆ ಸಿಬಿಐ ಕಸ್ಟಡಿಗೆ ನೀಡಿದೆ.

ವಿಚಾರಣೆ ಪೂರ್ಣಗೊಂಡ ಬಳಿಕ ಸಂಜೆ 4.30ಕ್ಕೆ ಬೇಗ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಐಎಂಎ ಹಗರಣದಲ್ಲಿ ರೋಷನ್ ಬೇಗ್ 200 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಬಿಐ ಬಂಧಿಸಿದ ಬಳಿಕ ರೋಷನ್ ಬೇಗ್ ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಿಂದಾಗಿ ವಿಚಾರಣೆ ನಡೆಸಲು ಸಿಬಿಐಗೆ ಸಾಧ್ಯವಾಗಿರಲಿಲ್ಲ.

- Advertisement -

Related news

error: Content is protected !!