Thursday, March 28, 2024
spot_imgspot_img
spot_imgspot_img

ರೋಷನ್‌ ಬೇಗ್‌ ಆಸ್ತಿ ಜಪ್ತಿ ಬಗ್ಗೆ ಸರ್ಕಾರಕ್ಕೆ ಗಡುವು ನೀಡಿದ ಹೈಕೋರ್ಟ್‌..!

- Advertisement -G L Acharya panikkar
- Advertisement -

ಬೆಂಗಳೂರು: ಮಾಜಿ ಸಚಿವ ಆರ್‌. ರೋಷನ್‌ ಬೇಗ್‌ ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದು,ಆಸ್ತಿ ಜಪ್ತಿಗೆ 2 ತಿಂಗಳ ಹಿಂದೆ ಆದೇಶ ನೀಡಿದ್ದರೂ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌ ಇದೀಗ ಆಸ್ತಿ ಜಪ್ತಿ ಪ್ರಕ್ರಿಯೆ ಬಗ್ಗೆ ನಿರ್ಧರಿಸಲು ಸರ್ಕಾರಕ್ಕೆ ಗಡುವು ನೀಡಿದೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನವನ್ನು ನೀಡಿದೆ.

ಅರ್ಜಿ ವಿಚಾರಣೆಗೆ ಬಂದಾಗ ರೋಷನ್ ಬೇಗ್ ಆಸ್ತಿ ಜಪ್ತಿ ವಿಚಾರದಲ್ಲಿ ಯಾವೆಲ್ಲಾ ಕ್ರಮ ಜರುಗಿಸಲಾಗಿದೆ ಎಂದು ನ್ಯಾಯಾಪೀಠ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು, ಲಾಕ್ ಡೌನ್ ಇದ್ದ ಕಾರಣ ರೋಷನ್ ಬೇಗ್ ಅವರ ಆಸ್ತಿ ಜಪ್ತಿ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದರು ಹೇಳಿದರು.

ಈ ಕಾರಣವನ್ನು ಒಪ್ಪದ ನ್ಯಾಯಪೀಠ, ಲಾಕ್’ಡೌನ್’ಗೂ, ಆಸ್ತಿ ಜಪ್ತಿ ಮಾಡುವ ಸಂಬಂಧ ತೀರ್ಮಾನ ತೆಗೆದುಕೊಳ್ಳುವಲ್ಲಿ ವಿಳಂಬ ಮಾಡುವುದಕ್ಕೂ ಯಾವುದೇ ಸಂಬಂಧವಿಲ್ಲ. ಆಸ್ತಿಗಳನ್ನು ಪರಭಾರೆ ಮಾಡಿದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಈ ವೇಳೆ ಸಿಬಿಐ ಪರ ವಾದಿಸಿದ ವಕೀಲ ಪಿ. ಪ್ರಸನ್ನ ಕುಮಾರ್‌, ‘ಹಗರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆ ಪೂರ್ಣಗೊಂಡಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಮಾಜಿ ಸಚಿವ ರೋಷನ್‌ ಬೇಗ್‌ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ದಾಖಲಿಸಲಾಗಿದ್ದು, ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್‌ಐಆರ್‌ ಹಾಗೂ ಆರೋಪಪಟ್ಟಿ ರದ್ದುಪಡಿಸಿ ಏಕಸದಸ್ಯ ಪೀಠ ನೀಡಿರುವ ಆದೇಶ ಸುಪ್ರೀಂನಲ್ಲಿ ಪ್ರಶ್ನಿಸಲಾಗುವುದು. ಮತ್ತೊಬ್ಬ ಐಪಿಎಸ್‌ ಅಧಿಕಾರಿ ಅಜಯ್‌ ಹಿಲೋರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ಕೋರಿ ಸರಕಾರಕ್ಕೆ ಶ್ರೀಘ್ರವೇ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

- Advertisement -

Related news

error: Content is protected !!