Tuesday, July 28, 2026
spot_imgspot_img
spot_imgspot_img

ಸಿಎಂ ಬಿಎಸ್‌ವೈ ಕಾರ್ಯದರ್ಶಿ ಸಂತೋಷ್ ಚೇತರಿಕೆ: ಇಂದು ಬಿಡುಗಡೆ

- Advertisement -
- Advertisement -

ಬೆಂಗಳೂರು: ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಚೇತರಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಪ್ರಸಕ್ತ ರಾಮಯ್ಯ ಆಸ್ಪತ್ರೆಯಲ್ಲಿ ಸಂತೋಷ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಪೊಲೀಸರು ಅವರ ಹೇಳಿಕೆ ಪಡೆಯಲಿದ್ದಾರೆ.

ರಾಜಕೀಯ ಒತ್ತಡದಿಂದ ತಮ್ಮ ಪತಿ ಬೇಸರಗೊಂಡಿದ್ದರು ಎಂದು ಸಂತೋಷ್ ಅವರ ಪತ್ನಿ ಜಾಹ್ನವಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುವ ಸಾಧ್ಯತೆ ಕೂಡ ಇದೆ.

- Advertisement -

Related news

error: Content is protected !!