Friday, April 19, 2024
spot_imgspot_img
spot_imgspot_img

ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಘೋಷಣೆ; ಸಚಿವ ಸುರೇಶ್ ಕುಮಾರ್

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಆರ್ಭಟ ಮುಂದುವರೆಯುತ್ತಿದ್ದು, ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದೀಗ ರಾಜ್ಯದಲ್ಲಿ ಶಾಲೆಗಳ ರಜಾ ಅವಧಿಯನ್ನು ಘೋಷಣೆ ಮಾಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮೇ 24ರಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪ್ರಥಮ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಲಾಗಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಈಗ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯನ್ನು ಘೋಷಿಸಲಾಗಿದೆ.

ಪ್ರಾಥಮಿಕ ಶಾಲೆಗಳಿಗೆ ಜೂನ್ 14 ರವರೆಗೂ ಬೇಸಿಗೆ ರಜೆ ಘೋಷಿಸಿದ್ದರೆ, ಪ್ರೌಢ ಶಾಲೆಗಳಿಗೆ ಈ ತಿಂಗಳ 31 ರವರೆಗೂ ರಜೆ ನೀಡಲಾಗಿದೆ. ಶಿಕ್ಷಣ ಇಲಾಖೆಯು ರಜಾ ಅವಧಿಯನ್ನು ಪರಿಷ್ಕರಿಸಿ ಸುತ್ತೋಲೆ ಹೊರಡಿಸಿದೆ. ಜೊತೆಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಬಗ್ಗೆಯೂ ಗಮನ ಹರಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಪ್ರೌಢ ಶಾಲಾ ಶಿಕ್ಷಕರು ರಜೆಯ ಅವಧಿಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ದತೆ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳ ಜೊತೆ ನಿರಂತರ ದೂರವಾಣಿ ಸಂಪರ್ಕದಲ್ಲಿರಬೇಕು. ವಿದ್ಯಾರ್ಥಿಗಳಿಗೆ ಕಲಿಕೆಗೆ ಪ್ರೇರೇಪಿಸಬೇಕು ಎಂದು ಹೇಳಿದೆ.

ಜೂನ್ 1ರಿಂದ 14ರವರೆಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಪುನರ್ಮನನ ತರಗತಿಗಳು ಆರಂಭವಾಗಲಿವೆ. ಜೂನ್ 15 ರಿಂದ 8, 9ನೇ ತರಗತಿಗಳು ಪ್ರಾರಂಭವಾಗಲಿವೆ. ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ನಿನ್ನೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದರು. ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಕೂಡ ಹೇಳಿದ್ದರು. ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ. ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ.

ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳು ಅವರಿಗೆ ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್ ಹೇಳಿದರು.

driving
- Advertisement -

Related news

error: Content is protected !!