- Advertisement -
- Advertisement -
ಬೆಂಗಳೂರು: ನಗರದ ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿಯಲ್ಲಿ ಕಳೆದ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ನಾಳೆ ಬೆಳಿಗ್ಗೆ 6 ಗಂಟೆ ತನಕ ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಯಾವುದೇ ವ್ಯಕ್ತಿ ಸಾರ್ವಜನಿಕರಿಗೆ ಧಕ್ಕೆ ಉಂಟಾಗುವ ಕೃತ್ಯದಲ್ಲಿ ತೊಡಗುವಂತಿಲ್ಲ. ಇಬ್ಬರಿಗಿಂತ ಹೆಚ್ಚು ಜನ ಒಂದೆಡೆ ಸೇರುವಂತಿಲ್ಲ. ಅನಗತ್ಯವಾಗಿ ಸಂಚರಿಸುವಂತಿಲ್ಲ. ಮೆರವಣಿಗೆ ಹಾಗೂ ಸಭೆ ನಡೆಸುವಂತಿಲ್ಲ ಎಂದು ಸೂಚಿಸಲಾಗಿದೆ.
ದೊಣ್ಣೆ, ಕತ್ತಿ ಸೇರಿದಂತೆ ಮಾರಾಕಾಸ್ತ್ರಗಳನ್ನು ಒಯ್ಯುವಂತಿಲ್ಲ. ವ್ಯಕ್ತಿಗಳ ಪ್ರತಿಕೃತಿಗಳನ್ನು ದಹನ ಮಾಡುವಂತಿಲ್ಲ ಎಂದು ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ.
- Advertisement -