Monday, April 29, 2024
spot_imgspot_img
spot_imgspot_img

ಇಂದು ಮಧ್ಯಾಹ್ನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ!

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ಸಿದ್ಧವಾಗಿದ್ದು, ಇಂದು ಲಭ್ಯವಾಗಲಿದೆ. ಇಂದು (ಆಗಸ್ಟ್ 09) ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿದ್ದು, ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್​ಎಸ್​ಎಲ್​ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ಈಗಾಗಲೇ ಫಲಿತಾಂಶ ಸಲ್ಲಿಸಿದ್ದಾರೆ. ಇದೀಗ ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶವನ್ನು ಇಂದು ಮಧ್ಯಾಹ್ನ ಪ್ರಕಟ ಮಾಡಲಿದ್ದು, ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬೀಳಲಿದೆ.

ಎಸ್​ಎಸ್​ಎಲ್​ಸಿ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ:

  • ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ
  • ಸ್ಕ್ರೀನ್​ನಲ್ಲಿ ರಿಸಲ್ಟ್​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ
  • ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ
  • ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ
  • ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ
  • ತಾತ್ಕಾಲಿಕ ಅಂಕಪಟ್ಟಿ ಆನ್​ಲೈನ್​ನಲ್ಲೇ ಲಭ್ಯವಾಗಲಿದ್ದು, ಅಲ್ಲಿಂದಲೇ ಡೌನ್​ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.

ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.

ಈ ವೆಬ್​ಸೈಟ್​ಗಳಲ್ಲಿ ಫಲಿತಾಂಶ ವೀಕ್ಷಿಸಿ
sslc.karnataka.gov.in
kseeb.kar.nic.in
karresults.nic.in

- Advertisement -

Related news

error: Content is protected !!