Tuesday, July 28, 2026
spot_imgspot_img
spot_imgspot_img

ಸಿಗ್ನಲ್ ನಲ್ಲಿ ಆಟಿಕೆ ಮಾರಾಟ ಮಾಡುವ ಮಕ್ಕಳ ಬಗ್ಗೆ ವರದಿ ಕೇಳಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು: ನಗರದ ಟ್ರಾಫಿಕ್ ಸಿಗ್ನಲ್ ನಲ್ಲಿ ಆಟಿಕೆಗಳು ಮತ್ತು ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುತ್ತಿರುವ ಮಕ್ಕಳ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದೆ.

ಈ ಹಿಂದೆ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಸೂಚಿಸಲಾಗಿದ್ದರೂ ಅದು ಪಾಲನೆಯಾಗದ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಆದೇಶ ನೀಡಿದೆ. ಮಕ್ಕಳ ಗುರುತು ಪತ್ತೆಹಚ್ಚಬೇಕು ಮತ್ತು ಅವರ ಕಲ್ಯಾಣಕ್ಕಾಗಿ ಮಾಹಿತಿಯೊಳಗೊಂಡ ಸಮಗ್ರ ವರದಿ ಸಲ್ಲಿಸುವಂತೆ ಹೈಕೋರ್ಟ್ ಕಾನೂನು ಪ್ರಾಧಿಕಾರಕ್ಕೆ ಸೂಚಿಸಿದೆ.

ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಈ ಬಗ್ಗೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಎಲ್ಲ ಅಗತ್ಯ ನೆರವು ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಒಕಾ ಅವರನ್ನೊಳಗೊಂಡ ಪೀಠ ನಿರ್ದೇಶಿಸಿದೆ.

- Advertisement -

Related news

error: Content is protected !!