Tuesday, July 28, 2026
spot_imgspot_img
spot_imgspot_img

ವಿನಯ್ ಕುಲಕರ್ಣಿ ಜೈಲು ಸೇರಿದ ಬಳಿಕ ಮೊದಲ ಬಾರಿಗೆ ಭೇಟಿ ಮಾಡಲು ಮುಂದಾದ ಡಿಕೆಶಿ!

- Advertisement -
- Advertisement -

ಬೆಂಗಳೂರು: ಧಾರವಾಡ ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಭೇಟಿಗೆ ಅನುಮತಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೋರಿದ್ದಾರೆ.

ಭೇಟಿಗೆ ಅವಕಾಶ ನೀಡಬೇಕೆಂದು ಕೋರಿ ನಗರದ ಜನಪ್ರತಿನಿಧಿಗಳ ಕೋರ್ಟ್ ಗೆ ಡಿಕೆ ಶಿವಕುಮಾರ್ ಪರ ವಕೀಲ ಮಂಜುನಾಥ್ ಅವರು ಇಮೇಲ್ ಮೂಲಕ ಅರ್ಜಿ ಸಲ್ಲಿಸಿದ್ದರು. ಭೇಟಿಗೆ ಸಂಬಂಧಿಸಿದಂತೆ ಜೂ.7ರೊಳಗೆ ಉತ್ತರಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ.

ವಿನಯ್ ಕುಲಕರ್ಣಿ ಅವರು ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿಗೆ ಭೇಟಿ ಮಾಡಲು ಡಿಕೆಶಿ ಮುಂದಾಗಿದ್ದಾರೆ.

- Advertisement -

Related news

error: Content is protected !!